ಬರೀ 33 ವರ್ಷಕ್ಕೆ ಹೃದಯಾಘಾತಕ್ಕೆ ಬಲಿಯಾದ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ
ತಮ್ಮ ಅದ್ಭುತ ಅಭಿನಯದ ಮೂಲಕವೇ ಜನಪ್ರಿಯತೆ ಪಡೆದಿಕೊಂಡಿದ್ದ ರಾಕೇಶ್ ಪೂಜಾರಿ ಬರೀ 33 ವರ್ಷಕ್ಕೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಷ್ಟ ಪಟ್ಟು, ತುಂಬಾ ಅವಮಾನಗಳನ್ನು ಮೆಟ್ಟಿ ನಿಂತು ಉತ್ತಮ ಬದುಕು ಕಟ್ಟಿಕೊಂಡಿದ್ದ ರಾಕೇಶ್ ಕಿರುತೆರೆಯ ಜೊತೆಗೆ ಚಿತ್ರರಂಗದಲ್ಲೂ ನಟನಾ ಚಾತುರ್ಯ ಮೆರೆದಿದ್ದರು. ರಿಷಬ್ ಶೆಟ್ಟಿಯ ‘ಕಾಂತಾರ ಸಿನಿಮಾದಲ್ಲಿ ಕೂಡ ನಟಿಸಿದ್ದರು.
ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ(33) ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಪೂಜಾರಿ ಸಾವಿಗೆ ನಟಿ ರಕ್ಷತಾ, ಶಿವರಾಜ್ ಕೆ ಆರ್ ಪೇಟೆ ಸಂತಾಪ ಸೂಚಿಸಿದ್ದಾರೆ.

