ಬಾಗೇವಾಡಿ ಕಾಂಗ್ರೆಸ ಪೂರ್ವಿಭಾವಿ ಸಭೆ ಉದ್ಘಾಟನೆ ಮಾಡಿದ ಎಚ್ ಕೆ ಪಾಟೀಲ
ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ, ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದ ಕುರಿತು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬಾಗೇವಾಡಿ ಹಾಗೂ ಕೋಲ್ದಾರ ಬ್ಲಾಕ್ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಶುಕ್ರವಾರದಂದು ಸಚಿವ ಎಚ್ ಕೆ ಪಾಟೀಲ್ ಉದ್ಘಾಟಿಸಿದ್ದರು. ಈ ವೇಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರ ಪರಿಶ್ರಮದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

