ವಿಜಯಪುರ: ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಬಡವರ ಅನುಕೂಲಕ್ಕೆ ಹಸಿವುಮುಕ್ತ ಕರ್ನಾಟಕ ಎಂಬ ದಿವ್ಯ ಸಂಕಲ್ಪವನ್ನು ಇರಿಸಿಕೊಂಡು ರಾಜ್ಯಾದ್ಯಂತ ನಮ್ಮಸರಕಾರ ದ ವತಿಯಿಂದ ಇಂದಿರಾ ಕ್ಯಾಂಟೀನ್ ಗಳು ನಿರ್ಮಿಸಲಾಗುತ್ತಿದೆ. ಇಂದು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದ್ದು ಸಂತಸ ತರಿಸಿದೆ. ಬಡವರು, ಕೂಲಿ ಕಾರ್ಮಿಕರು, ಪ್ರವಾಸಿಗರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಇದರಿಂದ ಅನುಕೂಲವಾಗಲಿದೆ. ಮತ್ತು ಆಹಾರದ ಗುಣಮಟ್ಟ ವನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವ ದಿಟ್ಟ ಹೆಜ್ಜೆ ಇದಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿತ ಅಧಿಕಾರಿಗಳು ಕಾಲಕಾಲಕ್ಕೆ ಗುಣಮಟ್ಟ ತಪಾಸಣೆ ನಡೆಸುವಂತೆ ಸೂಚಿಸಿರುವೆ.
ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ CEO ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆಯ ಸದಸ್ಯರುಗಳು, ಹಿರಿಯ ಮುಖಂಡರುಗಳು ಇಂದಿನ ಉದ್ಘಾಟನೆಯ ವೇಳೆ ಉಪಸ್ಥಿತರಿದ್ದರು.



