
ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗೆ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.
ಮಂಗಳವಾರ ಬೆಳಿಗ್ಗೆ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ ಮಾತನಾಡಿದ ಅವರು. ಬೆಳೆ ಹಾನಿ ರೈತರ ಪಟ್ಟಿ ಸಿದ್ಧಪಡಿಸಿ. ಪಟ್ಟಿಯನ್ನು ರೈತರ ಅವಗಾಹನೆಗಾಗಿ ಆಯಾ ಗ್ರಾಮ ಪಂಚಾಯತಿಯ ಸೂಚನಾ ಫಲಕದಲ್ಲಿ ಪಟ್ಟಿಯನ್ನು ಪಚುರ ಪಡೆಸಬೇಕು. ಬೆಳೆ ಹಾನಿ ಪಟ್ಟಿ ಪ್ರಕಟ್ಟಿಸಿದ 7 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕಾಲಾವಕಾಶ ಕಲ್ಪಿಸಿ, ರೈತರು ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆಹಾನಿ ಪ್ರಕರಣಗಳಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳದೇ 72 ಗಂಟೆಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು. ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆ ಬರುವ ಸೂಚನೆಯಿದ್ದಾಗ ಅಪಾಯದ ಮುನೂಚನೆಯ ಬಗ್ಗೆ ನದಿ, ಹಳ್ಳ-ಕೊಳ್ಳಗಳಿರುವ ಸ್ಥಳಗಳಲ್ಲಿ ನಿಗಾ ವಹಿಸಲು ಕ್ರಮ ಕೈಗೊಳ್ಳುವುದು. ಅಪಾಯ ಮುನ್ಸೂಚನೆಯ ಸೂಚನಾ ಫಲಕಗಳನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಆಳವಡಿಸಬೇಕು. ಜಿಲ್ಲೆಯಲ್ಲಿ ಎದುರಾಗಬಹುದಾದ ಪಕೃತಿ ವಿಕೋಪ ನಿಯಂತಣ ಕ್ರಮ ಕೈಕೊಳ್ಳುವುವದಕ್ಕಾಗಿ ಆಗಾಗ ಜಿಲ್ಲಾ ವಿಪತ್ತು ನಿರ್ವಹಣಾ ಪಾಧಿಕಾರ ಸಭೆ ಜರುಗಿಸಲಾಗಿದೆ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಮೂಲಕ ವಿಪತ್ತು ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಸೂಚನೆ ನೀಡಿದರು.



