ಶುಕ್ರವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ. ಕೃಷಿ ಇಲಾಖೆ. ಹಾಗೂ ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆಯ ಯೋಜನೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸ್ವಸಹಾಯ ಗುಂಪು ಚಟುವಟಿಕೆಗಳ ಕಾರ್ಯವ್ಯಾಪ್ತಿ ವಿಸ್ತರಿಸುವ ದೃಷ್ಟಿಯಿಂದ ಸಣ್ಣ ಉದ್ದಿಮೆ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವ ಮೂಲಕ ಸಿಗುವ ಸಾಲ-ಸೌಲಭ್ಯ ಪಡೆದುಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಂಬಂಧಿಸಿದ ಇಲಾಖೆಗಳು ಪೂರಕ ಮಾಹಿತಿ ಒದಗಿಸುವಂತೆ ಬ್ಯಾಂಕಗಳು ಅರ್ಹರಿಗೆ ಸಾಲ ಸೌಲಭ್ಯ ಒದಗಿಸಿ ಈ ಯೋಜನೆಯ ಲಾಭ ಅರ್ಹರಿಗೆ ತಲುಪಿಸುವಂತೆ ಅವರು ಹೇಳಿದರು.

ಜಿಲ್ಲೆಯಲ್ಲಿ ದ್ರಾಕ್ಷಿ, ದಾಳಿಂಬೆ, ಲಿಂಬೆ, ಬಿಳಿಜೋಳ ಹಾಗೂ ವಾಣಿಜ್ಯ ಬೆಳೆಗಳು ಸರಿದಂತ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತದೆ. ರೈತರು ತಮ್ಮ ವ್ಯವಸಾಯದೊಂದಿಗೆ ಕಿರು ಆಹಾರ ಧಾನ್ಯ ಘಟಕಗಳ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಉದ್ದಿಮೆದಾರರಾಗಿ ತಾವುಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಿದ ಸಾ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ಕುರಿತು ಚಿಂತನೆ ಅಗತ್ಯ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಒಂದು ಉತ್ತಮ ಯೋಜನೆಯಾಗಿದೆ. ಫಲಾನುಭವಿಗಳಿಗೆ ಜಿಲ್ಲೆಯ ರೈತರು, ಸ್ವಸಹಾಯ ಗುಂಪುಗಳು, ವೈಯಕ್ತಿಕ ಉದ್ದಿಮೆದಾರರು, ಮಾಲಿಕತ್ವ ಸಂಸ್ಥೆಗಳು. ಪಾಲುದಾರಿಕೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಇದರಿಂದ ರೈತರಿಗೂ, ಬ್ಯಾಂಕುಗಳಿಗೂ ಹಾಗೂ ಮಹಿಳಾ ಸಂಘಗಳಿಗೂ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.




