ವಿಜಯಪುರ ಜಿಲ್ಲೆಯಲ್ಲಿ ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು.

ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ ಹಾಗೂ ಎಂಬತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ. ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು.ಅಡಿವೆಪ್ಪ ಸಾಲಗಲ್ ಮಾತನಾಡಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರು ಹಾಕಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸತತ ಪರಿಶ್ರಮ ಕಠಿಣ ಅಭ್ಯಾಸಗಳಿಂದ ಅವರು ಮಾಡಿರುವ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೇರಣೆ ಹೊಂದಿ ಸಾಧನೆಯ ಹಾದಿಯಲ್ಲಿ ಸಾಗಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಹೇಳಿದರು.

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಶ್ರೀಮತಿ ಸಂಗೀತಾ ಮಠಪತಿ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಾರ್ತಾ ಅಧಿಕಾರಿ ಅಮರೇಶ ದೊಡಮನಿ,ಎಸ್.ಕೆ.ಇನಾಮದಾರ್, ಜಿ.ಎಂ.ಕೊಕರೆ,ನಾಗರಾಜ ಲಂಬು, ಸಂಜಯ ಹಿರೆಮಠ, ಎಸ್.ಎಸ್.ಹಿರೇಮಠ, ಕೃಷ್ಣ ರಾಠೋಡ,ಚಂದ್ರಕಾಂತ್ ತಾರನಾಳ ಸೇರಿದಂತೆ ವಿವಿಧ ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು, ಕ್ರೀಡಾಸಕ್ತರು, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



