ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ರಾಜೇಸಾಬ ಬಾವಾಸಾಬ ಮುಲ್ಲಾ ಎಂಬಾತ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಜನರಿಗೆ ಒಂದು ರೂಪಾಯಿಗೆ 80 ರೂಪಾಯಿ ನೀಡುತ್ತೇನೆ ಎಂದು ಆಮಿಷವೊಡ್ಡಿ ಅಕ್ರಮ ಮಟಕಾ ಚೀಟಿ ನಡೆಸುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ 450 ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ರವಿವಾರದಂದು ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




