ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಬೇವನೂರ ತಾಂಡಾ ಕ್ರಾಸ್ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಸೊಲ್ಲಾಪುರ ನಿವಾಸಿಗಳಾದ ಫಿರೋಜ್ ನೂರೆವಾಲೆ ಮತ್ತು ಸಂಜೀವಕುಮಾರ ಟೆಂಗಳೆ ಅವರನ್ನು ಬಂಧಿಸಲಾಗಿದೆ.ಆರೋಪಿಗಳಿಂದ ಟಂಟಂ ಗೂಡ್ರಡ್, 880 ಕೆಜಿ ಅಕ್ಕಿ ಹಾಗೂ 60,636 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂಡಿ ಗ್ರಾಮೀಣ ಠಾಣೆಯ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.




