ಕರ್ನಾಟಕ ರಾಜ್ಯದಲ್ಲಿ ಅತಿವೃಷ್ಠಿಯಿಂದಾದ ಹಾನಿಗಳು ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇಂದು ಬೆಂಗಳೂರಿನ ಕುಮಾರಕೃಪ ರಸ್ತೆಯಲ್ಲಿರುವ ಕೃಷ್ಣಾ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಡಿಯೋ ಸಂವಾದದ ಮೂಲಕ ಚರ್ಚಿಸಿದರು.




