ಇಂದಿನಿಂದ ಮುಂದಿನ ಐದು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಬಿರುಗಾಳಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಈ ಮೇಲಿನ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.




