ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಇಂದು ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಸ್ಲಿಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್ನಲ್ಲಿದ್ದ ಒಟ್ಟು 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಲು ಸಿಲುಕಿ ಗಾಯಗೊಂಡಿದ್ದ ಪ್ರಯಾಣಿಕ ವಿಶ್ವನಾಥ್ನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಲ್ಲೇ ಕ್ರೇನ್ ಮೂಲಕ ಬಸ್ ಮೇಲೆತ್ತಲಾಗಿದ್ದು, ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




