ಇಂದಿನಿಂದ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾದಗಿರಿ, ವಿಜಯಪುರ, ಬಾಗಲಕೋಟ,ರಾಯಚೂರು,ಕೊಪ್ಪಳ,ಗದಗ, ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಬಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಈ ಮೇಲಿನ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.




