ಹಾವೇರಿ ಜಿಲ್ಲೆಯ ತಡಸ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಇಂದು ಬೆಳಕಿಗೆ ಬಂದಿದೆ. ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಇಬ್ಬರು ಯುವಕರು ಕೆಲ ದಿನಗಳ ಹಿಂದೆ ಕಾರಿನಲ್ಲಿ ಬಂದು ಅಪಹರಿಸಿದ್ದರು. ಬಳಿಕ ಮಮದಾಪುರ ಹೊರವಲಯದ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದು, ವಿಡಿಯೋ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪೊಲೀಸರು ಅಭಿಷೇಕ ಲಮಾಣಿ ಮತ್ತು ಪ್ರವೀಣ ಲಮಾಣಿ ಎನ್ನುವವರನ್ನು ಬಂಧಿಸಿದ್ದಾರೆ.




