ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಕೆಲವು ಸಚಿವರು ಒಂದು ಕಡೆ, ಮತ್ತೆ ಕೆಲವರು ಇನ್ನೊಂದು ಕಡೆ ಇದ್ದಾರೆ. ನವೆಂಬರ್ನಲ್ಲಿ ಇದರಿಂದಲೇ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ವೀರಶೈವ ಲಿಂಗಾಯತ ಮಠಾಧೀಶರ ಸೂಚನೆಗಳ ನಡುವೆಯೂ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.




