ಸ್ಯಾಂಡಲ್ ವುಡ್ನ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪರಿಣಾಮ ಅವರ ಆರೋಗ್ಯ ಗಂಭೀರವಾಗಿದೆ. ಅವರನ್ನು ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರು ದಶಕಗಳ ಕಾಲ 350ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಉಮೇಶ್, ತಮ್ಮ ವಿಶಿಷ್ಟ ಸಂಭಾಷಣೆ ಮತ್ತು ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದಾರೆ. 1990ರ ‘ಗೋಲ್ಮಾಲ್ ರಾಧಾಕೃಷ್ಣ’ ಚಿತ್ರದ ‘ಸೀತಾಪತಿ’ ಪಾತ್ರ ಮತ್ತು ‘ಅಪಾರ್ಥ ಮಾಡ್ಕೊಂಡ್ಲಿಟ್ರೋ ಎನೋ’ ಸಂಭಾಷಣೆ ಜನಪ್ರಿಯವಾಗಿತ್ತು.




