ವಿಜಯಪುರ ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಸಂಸದ ಗೋವಿಂದ ಕಾರಜೋಳ ಮಾತನಾಡಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನವರು ಒಳ ಮೀಸಲಾತಿಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದರು. ಆದರೆ ಈಗ ತಾವು ಅಧಿಕಾರಕ್ಕೆ ಬಂದರೂ ಸಹ ಒಳ ಮೀಸಲಾತಿಗಾಗಿ ಕಾಂಗ್ರೆಸ್ ಯಾವುದೇ ಧ್ವನಿ ಎತ್ತುತ್ತಿಲ್ಲ ಎಂದು ಕಾಂಗ್ರೇಸ್ಸಿಗರ ವಿರುದ್ಧ ಕಿಡಿ ಕಾರಿದರು.




