ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ಗೆ ಅನುಮತಿ ನೀಡಿದ್ದು ಯಾರು ಎಂದು ಪ್ರಶ್ನಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ಗೆ ನಿಷೇಧವಿದ್ದಾಗ ನಮ್ಮ ದೇಶದಲ್ಲಿ ಏಕೆ ಅನುಮತಿ ನೀಡಬೇಕು.

ಎಂದು ಟ್ವಿಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನಕ್ಕೆ ತಹಸೀಲ್ದಾರ್ನಿಂದ ಎಸ್ಪಿ ವರೆಗೆ ಅನುಮತಿ ಪಡೆಯಬೇಕೆಂದು ಆದೇಶ ಹೊರಡಿಸುವ ರಾಜ್ಯ ಸರ್ಕಾರ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿದವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



