ವಿಜಯಪುರ ಜಿಲ್ಲೆಯ ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದ ಕುರಿತು ವಿಜಯಪುರ ನಗರದಲ್ಲಿ ಎಡಿಜಿಪಿ ಆರ್ ಹಿತೇಂದ್ರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ. ಸೆಪ್ಟೆಂಬರ್ 16 ರಂದು ನಡೆದಿದ್ದ ಚಡಚಣ ಪಟ್ಟಣದಲ್ಲಿರುವ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು.ಬಿಹಾರ ರಾಜ್ಯದ ರಾಕೇಶಕುಮಾರ ಸಹಾನಿ, ರಾಜಕುಮಾರ ಪಾಸ್ವಾನ, ರಕ್ಷಕಕುಮಾರ್ ಮಾತೋ ಬಂಧಿತ ಆರೋಪಿಗಳು. ಮೂವರು 21 ರಿಂದ 22 ವಯಸ್ಸಿನ ಯುವಕರಾಗಿದ್ದಾರೆ. ಬಂಧಿತ ಮೂವರು ಆರೋಪಿಗಳು ಅಕ್ರಮವಾಗಿ ಪಿಸ್ತೂಲ್ ಪೂರೈಕೆ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಹಿನ್ನೆಲೆ ಬಿಹಾರ ರಾಜ್ಯಕ್ಕೆ ತೆರಳಿ ಬಂಧನ. ಸದರಿ ಪ್ರಕರಣದಲ್ಲಿ ಇಲ್ಲಿಯವರೆಗೂ 9.1 ಕೆಜಿ ಚಿನ್ನ, 86,31,220 ರೂ. ನಗದು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯದ ಪ್ರಮುಖ ಆರೋಪಿಯನ್ನು 7-10-20025 ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಟ್ಟು ಚಡಚಣ ಬ್ಯಾಂಕ್ ದರೋಡೆಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ದಿನಾಂಕ: 24.08.2025 ರಂದು ಮುಂಜಾನೆ 08.15 ಗಂಟೆಯಿಂದ ದಿನಾಂಕ: 25.08.2025 ರಂದು ಮುಂಜಾನೆ 11.45 ಗಂಟೆಯ ನಡುವೆ ಯಾರೋ ಆರೋಪಿತರು ಮುದ್ದೇಬಿಹಾಳ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಬಾಡಿಗೆ ಮನೆಯ ಬೀಗ ಮುರಿದು ಒಟ್ಟು 30,14,500/- ರೂ.ಗಳ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ತನಿಖೆಯ ಕುರಿತು ಪೊಲೀಸ್ ಅಧೀಕ್ಷಕರು ವಿಜಯಪುರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ವಿಜಯಪುರ ಹಾಗೂ ಪೊಲೀಸ್ ಉಪಾಧೀಕ್ಷಕರು ಬಸವನ ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ,ಮುದ್ದೇಬಿಹಾಳ ಸಿಪಿಐ, ಪಿಎಸ್ಐ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.ತನಿಖಾ ತಂಡವು ಖಚಿತ ಮಾಹಿತಿ ಮೇರೆಗೆ ಕೃತ್ಯದಲ್ಲಿ ಭಾಗಿಯಾದ ಆರೋಪಿತರಾದ ಸುನೀಲ ಮಲ್ಲೇಶಿ ರಜಪೂತ, ಚೇತನ ಪಾಂಡು ಲಮಾಣಿ, ರಾಹುಲ ಪರಶುರಾಮ ಲಮಾಣಿ ಎಂಬ ಆರೋಪಿತರನ್ನು ಬಂಧಿಸಿ ಆರೋಪಿತರಿಂದ ಕಳವು ಮಾಡಿದ್ದ, 250 ಗ್ರಾಂ ಬಂಗಾರದ ಆಭರಣಗಳು, 50 ಗ್ರಾಂ ಬೆಳ್ಳಿಯ ಆಭರಣಗಳು, ಹಾಗೂ ಕೃತ್ಯ ಎಸಗಲು ಬಳಸಿದ 02 ಸ್ವಿಪ್ಟ್ ಕಾರುಗಳು, 02 ಮೋಟರ್ ಸೈಕಲ್ಗಳು, 04 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.




