ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ. NDA ಮೈತ್ರಿಕೂಟ ದ್ವಿಶತಕ ಬಾರಿಸಿ ಮುನ್ನುಗ್ಗುತ್ತಿದ್ದು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. NDA 201 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕ್ಷಣ ಕ್ಷಣಕ್ಕೂ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ ಕೇವಲ 35 ರಷ್ಟು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ ಕೇವಲ 4 ಕ್ಷೆತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ.





