ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಬಿಜೆಪಿ ರಾಜ್ಯಧ್ಯಕ್ಷರಾದ ಬಿ. ವೈ ವಿಜಯೇಂದ್ರರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಇದೆ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಅಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬಸ್ ಗಳಲ್ಲಿ ಕರೆದೋಯ್ದಿದ್ದಾರೆ.

ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ, ವಿಧಾನ ಪರಿಷತ್ ಶಾಸಕರಾದ ಹಣಮಂತ ಆರ್.ನಿರಾಣಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರು, ಪಕ್ಷದ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಜಿಯಾಗಿದ್ದರು.



