ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳ್ಳತನ ನಡೆದು ವಿಜಯಪುರ ಜಿಲ್ಲೆ ಯಲ್ಲಿ ಬಾರಿ ಸಂಚಲನ ಮೂಡಿಸಿತು
ಕಳೆದ ದಿನಾಂಕ: 23.05.2025 ರಂದು ದಿನಾಂಕ: 25.05.2025 ರ ಬೆಳಿಗ್ಗೆ 11.30 ಗಂಟೆಯ ನಡುವಿನ ಅವಧಿಯಲ್ಲಿ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ಯಾರೋ ಕಳ್ಳರು ಬ್ಯಾಂಕ್ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ ಒಳಹೊಕ್ಕು, ಬ್ಯಾಂಕ್ ಸೇಫ್ ಲಾಕರ್ ರೂಮ್ನ ಗಿಲ್ನ ಸರಳುಗಳನ್ನು ಕಟ್ ಮಾಡಿ ಬೆಂಡ್ ಮಾಡಿ ಒಳ ಹೊಕ್ಕು, ಲಾಕರ್ನಲ್ಲಿದ್ದ ಸುಮಾರು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ ರೂ. 5,20,450/-ಹೀಗೆ ಒಟ್ಟು 53,31,20,450/- ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿ ಅಲ್ಲದೇ ತಮ್ಮ ಗುರುತು ಪತ್ತೆ ಆಗದಂತೆ ಬ್ಯಾಂಕಿನಲ್ಲಿರುವ ಸಿ.ಸಿ.ಟಿ.ವ್ಹಿ ಕ್ಯಾಮೆರಾಗಳ ಎನ್.ವಿ.ಆರ್ ಸಹ ತೆಗೆದುಕೊಂಡು ಹೋಗಿದ್ದರು. ಈ ಬಗ್ಗೆ ದಿನಾಂಕ: 26.05.2025 ರಂದು ಮನಗೂಳಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ : 69/2025 ಕಲಂ: 331(3), 331(4), 305(ಇ) ಬಿ.ಎನ್.ಎಸ್ -2023 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆಯಲ್ಲಿ ಪ್ರಾರಂಭಿಸಿದರು
ಪ್ರಕರಣದ ಪತ್ತೆ ಕುರಿತು ಲಕ್ಷ್ಮಣ ನಿಂಬರಗಿ, ಜಿಲ್ಲಾ SP ವಿಜಯಪುರ ಹಲವಾರು ಸಿಬ್ಬಂದಿ ಗಳನ್ನೊಳಗೊಂಡ 08 ವಿಶೇಷ ತಂಡ ಆರೋಪಿತರ ಪತ್ತೆ ಕುರಿತು ರಚಿಸಲಾಗಿತ್ತು.
ಈ ಪ್ರಕರಣದಲ್ಲಿನ ಆರೋಪಿತರು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೇ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಕೂಡಾ, 08 ತಂಡಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ವೈಜ್ಞಾನಿಕ ರೀತಿಯಿಂದ ಸಾಕ್ಷಾಧಾರಗಳನ್ನು ಸಂಗ್ರಹಿಸಿ, ಪ್ರಕರಣದಲ್ಲಿ ಭಾಗಿಯಾಗಿದ್ದ ಮೂರು ಜನ ಆರೋಪಿತರಾದ:
ಆರೋಪಿತರಾದ
1) ವಿಜಯಕುಮಾರ ತಂದೆ ಮೋಹನರಾದ ಮಿರಿಯಾಲ, 41 ವರ್ಷ, ಸೀನಿಯರ್ ಮ್ಯಾನೇಜರ್ ಕೆನರಾ ಬ್ಯಾಂಕ್, ಸಾ: ನಂ: 86, ಕೋಠಾರಿ ನಗರ, ಗದಗ ರೋಡ್ ಹುಬ್ಬಳ್ಳಿ
2) ಚಂದ್ರಶೇಖರ ತಂದೆ ಕೊಟಿಲಿಂಗಮ್ ನೆರೆಲ್ಲಾ, 38 ವರ್ಷ, ಖಾಸಗಿ ಉದ್ಯೋಗಿ ಸಾ: ನಂ: 71. ಜನತಾ ಕಾಲೋನಿ, ಗದಗ ರೋಡ್, ಹುಬ್ಬಳ್ಳಿ,
3) ಸುನೀಲ ತಂದೆ ನಂರಸಿಂಹಲು ಮೋಕಾ, 40 ವರ್ಷ, ಚಾಲಕ, ಸಾ: ನಂ: 64, ಚಾಲುಕ್ಯ ನಗರ, ಗದಗ ರೋಡ್, ಹುಬ್ಬಳ್ಳಿ



ಇವರನ್ನು ಬಂಧಿಸಿ, ಆರೋಪಿತರಿಂದ ಕೃತ್ಯಕ್ಕೆ ಬಳಸಿದ 02 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಇನ್ನುಳಿದ ಆರೋಪಿತರು ಹಾಗೂ ಕಳುವಾದ ವಸ್ತುಗಳ ಪತ್ತೆ ಕಾರ್ಯ ಮುಂದುವರೆದಿದೆ.
ಸದರಿ ಪ್ರಕರಣದ ಪತ್ತೆ ಕುರಿತು ಕರ್ತವ್ಯ ನಿರ್ವಹಿಸಿದ ಎಲ್ಲ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ: ಶಂಕರ ಮಾರಿಹಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು-1, ವಿಜಯಪುರ ಮತ್ತು ರಾಮನಗೌಡ ಹಟ್ಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ, ಡಿಎಸ್ಪಿ ರವರಾದ ಟಿ.ಎಸ್.ಸುಲ್ಪಿ, ಸುನೀಲ ಕಾಂಬಳೆ, ಬಲ್ಲಪ್ಪ ನಂದಗಾವಿ, ಸಿಪಿಐ ರವರುಗಳಾದ ರಮೇಶ ಅವಜಿ, ಗುರುಶಾಂತ ದಾಶ್ಯಾಳ, ಅಶೋಕ ಚವ್ಹಾಣ, ಪಿಎಸ್ಐ ರವರುಗಳಾದ ಶ್ರೀಕಾಂತ ಕಾಂಬಳೆ, ಅಶೋಕ ನಾಯಕ, ದೇವರಾಜ ಉಳ್ಳಾಗಡ್ಡಿ, ಬಸವರಾಜ ತಿಪ್ಪರೆಡ್ಡಿ, ರಾಕೇಶ ಬಗಲಿ, ಸೊಮೇಶ ಗೆಜ್ಜಿ, ವಿನೋದ ದೊಡಮನಿ, ವಿನೋದ ಪೂಜಾರಿ, ಶಿವಾನಂದ ಪಾಟೀಲ, ಯತೀಶ ಕೆ, ನಾಗರತ್ನ ಉಪ್ಪಲದಿನ್ನಿ ಹಾಗೂ ಕರ್ತವ್ಯವನ್ನು ಶ್ಲಾಘಿಸಲಾಗಿದೆ.
ಲಕ್ಷ್ಮಣ ನಿಂಬರಗಿ, ಐಪಿಎಸ್
ಪೊಲೀಸ್ ಅಧೀಕ್ಷಕರು, ವಿಜಯಪುರ ಜಿಲ್ಲೆ.



