ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ ಇಂದು ಮುಂಜಾನೆ ಕಾರೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಪರಿಣಾಮವಾಗಿ ಸಿಎಂ ನಿವಾಸದ ಸುತ್ತ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸದಾಶಿವ ನಗರದಿಂದ ಕಾವೇರಿ ನಿವಾಸದ ನಡುವಿನ ರಸ್ತೆಯಲ್ಲಿ ವಾಹನ ಸವಾರರು ಪರದಾಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.




