
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಗರಿಕ ವಿಮಾನ ಸೇವೆ ಆರಂಭವಾಗಿ ಇಂದಿಗೆ 2 ವರ್ಷಗಳಾಗಿದೆ. ನಮ್ಮ KSIIDC ಮೂಲಕ ರಾಜ್ಯ ಸರಕಾರವೇ ನಿರ್ವಹಿಸಲು ಆರಂಭಿಸಿದ ಪ್ರಪ್ರಥಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿರುವ ವಿಮಾನ ನಿಲ್ದಾಣ ಇದಾಗಿದ್ದು, ಯಶಸ್ವಿಯಾಗಿ 2 ವರ್ಷಗಳನ್ನು ಪೂರೈಸಿ 3ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದೇವೆ. ಇನ್ನೂ ಈ ಅವಧಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸುಗಮ ಸೇವೆ ನೀಡಿರುವುದು ಹೆಮ್ಮೆಯ ಸಂಗತಿ. ಶಿವಮೊಗ್ಗ ವಿಮಾನ ನಿಲ್ದಾಣ ಮೂಲಕ ಬೆಂಗಳೂರು, ಗೋವಾ, ಹೈದರಾಬಾದ್, ತಿರುಪತಿ, ಚೆನ್ನೈಗೆ ವಿಮಾನ ಸೇವೆ ಲಭ್ಯವಿದೆ. ಸದ್ಯದಲ್ಲೇ MRO (ಮೆಂಟನನ್ಸ್, ರಿಪೇರಿ & ಓವರ್ಹಾಲ್) ಸೌಲಭ್ಯವೂ ಆರಂಭವಾಗಲಿದೆ.

ಮುಂದಿನ ದಿನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು ಮಲೆನಾಡಿನ ಆರ್ಥಿಕತೆ, ಪ್ರವಾಸೋದ್ಯಮ ಹಾಗೂ ಉದ್ಯೋಗಾವಕಾಶಗಳಿಗೆ ಇನ್ನಷ್ಟು ಶಕ್ತಿ ತುಂಬಲಿದೆ ಎಂದು ತಮ್ಮ ಫೇಸ್ಬುಕ್ ಅಕೌಂಟ್ ನಲ್ಲಿ ಪೋಸ್ಟ್ ಹಾಕುವ ಮೂಲಕ ಸಚಿವ ಎಂ ಬಿ ಪಾಟೀಲ್ ಹಂಚಿಕೊಂಡಿದ್ದಾರೆ.



