ವಿವಿಧ ಕಾಮಗಾರಿಗಳ ಉದ್ಘಾಟನೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮನ ಹಿನ್ನೆಲೆ, ಇಂದು ಜವಳಿ ಸಚಿವ ಶಿವಾನಂದ ಪಾಟೀಲ್ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಯಾವುದೇ ರೀತಿಯಿಂದ ಕುಂದು ಕೊರತೆ ಆಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನ0ತರ ಮಾಧ್ಯಮ ಗೋಷ್ಠಿ ಕರೆದು ಕೃಷ್ಣ ಮೇಲ್ದಂಡೆ ಯೋಜನೆಯ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇ 23ಕ್ಕೆ ಆಗಮಿಸಲಿದ್ದಾರೆ ಎಂದು ವಿಜಯಪುರದಲ್ಲಿ ಗುರುವಾರದಂದು ಸಚಿವ ಶಿವಾನಂದ ಪಾಟೀಲ್ ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

