ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ಮದ್ದೂರಿಗೆ ಭೇಟಿ ನೀಡಿದ್ದ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಾರ್ವಜನಿಕರನ್ನುದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಗುರುವಾರ ಮದ್ದೂರ ಪಟ್ಟಣಕ್ಕೆ ಭೇಟಿ ನೀಡಿದ್ದ ಯತ್ನಾಳ್, ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದರು. ಆ ವೇಳೆ, ಅನ್ಯ ಕೋಮಿನ ಧರ್ಮಕ್ಕೆ ಧಕ್ಕೆ ತರುವ ಹಾಗೂ ಕೋಮುಗಳ ನಡುವೆ ವೈರತ್ವ ಉಂಟು ಮಾಡುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪಿಎಸ್ಐ ಮಂಜುನಾಥ್ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಬಳಿಕ ಮತ್ತೋರ್ವ ಶಾಸಕರ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.




