
ಕರ್ನಾಟಕದಲ್ಲಿ ಸುಮಾರು ದಿನಗಳಿಂದ ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ ಇನ್ನೂ ಮುಂದೆ ಹವಾಮಾನ ವರದಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ನಿನ್ನೆ ಸುರಿದ ಮಳೆಗೆ ರಾಜ್ಯದ ಹಲವು ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳು, ಅಂಗನವಾಡಿಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ತಾಲ್ಲೂಕುಗಳಲ್ಲಿ ಜಲಮೂಲಗಳು ಮತ್ತು ಸಮುದ್ರದ ಬಳಿ ಹೋಗದಂತೆ DC ರವರು ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಮಧ್ಯೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಅಣೆಕಟ್ಟಿನಿಂದ 13,192 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಬೆಳಗಾವಿ, ಬೀದರ್, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಹಲವೆಡೆ ಮಳೆಯಾಗಲಿದೆ. ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ Red ಅಲರ್ಟ್ ಘೋಷಿಸಲಾಗಿದೆ.



