ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಮಹೇಶ್ ಸಂಖ ರವರ ನೇತೃತ್ವದಲ್ಲಿ ಇಂದು ಬಿ ಎಂ ಪಾಟೀಲ್ ಶಾಲೆಯ ವಿದ್ಯಾರ್ಥಿಗಳಿಂದ ತೆರೆದ ಮನೆ ಎಂಬ ಕಾರ್ಯಕ್ರಮ ಮಾಡಲಾಯಿತು. ಇದೇ ವೇಳೆ ಮಾತನಾಡಿದ ಜಲನಗರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಸಂಖ. ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಿದರು. ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಸಹಾಯವಾಣಿ ಸಂಖ್ಯೆ 112, ಸೈಬರ್ ಅಪರಾಧ ದೂರುಗಳಿಗಾಗಿ ಬಳಸಬಹುದಾದ ಸಹಾಯವಾಣಿ ಸಂಖ್ಯೆಗಳ ಮಹತ್ವ ತಿಳಿಸಿ. ಯಾವುದೇ ತಪ್ಪು, ತೊಂದರೆ ಇದ್ದರೆ ಧೈರ್ಯವಾಗಿ ಸಂಪರ್ಕಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಭಾಗಿಯಾಗಿದ್ದರು.





