ಹಿರಿಯ ಕಾಂಗ್ರೆಸ್ ನಾಯಕ, ಕೇರಳ ವಿಧಾನಸಭೆಯ ಮಾಜಿ ಸ್ಪೀಕರ್ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಪಿ.ಪಿ. ಥಂಕಚನ್ ಗುರುವಾರ ರಾತ್ರಿ (88ನೇ ವಯಸ್ಸಿನಲ್ಲಿ) ನಿಧನರಾದರು. ಶ್ವಾಸಕೋಶದ ಸೋಂಕು ಹಾಗೂ ವಯೋಸಹಜ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಾಂತ ಮತ್ತು ಸೌಮ್ಯ ವ್ಯಕ್ತಿತ್ವವನ್ನು ಹೊಂದಿದ್ದ ರಾಜಕಾರಣಿಯಾಗಿ ಗುರುತಿಸಿಕೊಂಡ ಥಂಕಚನ್ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.




