ಬಣಜಿಗ ಸಮಾಜವನ್ನು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವೆಂದು ಪರಿಗಣಿಸಿ, ತಕ್ಷಣವೇ 2A ಮೀಸಲಾತಿ ನೀಡುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಬಣಜಿಗ ಸಮಾಜದ ಮುಖಂಡ ಗುರುಲಿಂಗಪ್ಪ ಅಂಗಡಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.ವಿಜಯಪುರ ನಗರದ ಖಾಸಗಿ ಹೋಟೆಲವೊಂದರಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಬಣಜಿಗ ಸಮಾಜದ ಮುಖಂಡ ಗುರುಲಿಂಗಪ್ಪ ಅಂಗಡಿ, ಬಣಜಿಗ ಸಮಾಜಕ್ಕೆ ನ್ಯಾಯಾಲಯದ ಆದೇಶದಂತೆ ಸಾಮಾಜಿಕ ನ್ಯಾಯ ದೊರಕುವಂತೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಸಮಾಜದ ಮುಖಂಡರು, ಹೈಕೋರ್ಟ್ ಆದೇಶದ ಅನುಷ್ಠಾನಕ್ಕೆ ಸ್ಪಷ್ಟ ಆದೇಶ ಹೊರಡಿಸಿ, ಜಾತಿ ಪ್ರಮಾಣಪತ್ರ ಮತ್ತು ಸರ್ಕಾರಿ ನೇಮಕಾತಿಗಳಲ್ಲಿನ ಗೊಂದಲ ನಿವಾರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.




