ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ ೨ ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ (SHS-2025) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತೆಯೇ ಸೇವೆ ಪಾಕ್ಷಿಕ ಅಭಿಯಾನವನ್ನು ಸೆಪ್ಟೆಂಬರ್ 17, 2025 ರಿಂದ 2ನೇ ಅಕ್ಟೋಬರ್ 2025ರವರೆಗೆ ಜಿಲ್ಲೆಯಾದ್ಯಂತ ಆಯೋಜಿಲಾಗಿದ್ದು, ಅಭಿಯಾನದ ಯಶಸ್ವಿಗೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕ್ರಿಯಾಶೀಲತೆಯಿಂದ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ತಿಳಿಸಿದರು.




