ಚಾಮರಾಜನಗರ : ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆಯ ಮೆರೆದಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಂಡ್ಯಕ್ಕೆ ತೆರಳುತ್ತಿದ್ದರು.
ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳುತ್ತಿದ್ದರು.
ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವೆ, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಾಯಾಳುಗಳನ್ನು ಸಾಗಿಸಲು ಎಲ್ಲಾ ವ್ಯವಸ್ಥೆ ಮಾಡಿದರು. ಈ ವೇಳೆ ಸ್ಥಳೀಯರು ದೊಡ್ಡರಾಯಪೇಟೆ ಕ್ರಾಸ್ ನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.




This was refreshingly exciting — loved it!
Your writing is polished, thoughtful, and impactful.
Your excitement is contagious — brilliant job!
You have an amazing way of connecting with readers.
This post really exceeded my expectations.
You write with such spark — I’m genuinely impressed!
I can’t stop smiling — this post made my day!
This post had me smiling from start to finish — thank you!
This is the kind of content that keeps me coming back.
This pumped me up in the best way possible!