ಶಿರಸಂಗಿ ಗ್ರಾಮದ ಕಾಳಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಎಂಬಿ ಪಾಟೀಲ್, ನಾಡಿನ ಜನತೆಗೆ ಒಳಿತಾಗಲಿ, ರೈತರ ಬದುಕು ಹಸನಾಗಲಿ, ಜನರು ನೆಮ್ಮದಿಯಿಂದ ಜೀವನ ಸಾಗಿಸಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷ ನವರಾತ್ರಿ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.




