ಸರಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡುವ ‘ಪ್ರಧಾನ ಮಂತ್ರಿ ಸ್ಕೂಲ್ ಆಫ್ ರೈಸಿಂಗ್ ಇಂಡಿಯಾ ‘ (ಪಿಎಂಶ್ರೀ) ಯೋಜನೆಗೆ ನಿಮ್ಮ ಶಾಲೆ ಆಯ್ಕೆಯಾಗಿದೆ ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿಯಾಗಿದೆ. ಅದರ ಸದುಪಯೋಗಪಡಿಸಿಕೊಳ್ಳಲು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಬಿ.ಯಡ್ರಾಮಿ ಕರೆ ನೀಡಿದರು.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ (ಪಿಎಂಶ್ರೀ) ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕರ ಮತ್ತು ಶಿಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು. ಪಿಎಂಶ್ರೀ ತಾಲೂಕಿನಲ್ಲಿ ನಿಮ್ಮ (ಉರ್ದು ವಿಭಾಗದ) ಶಾಲೆ ಆಯ್ಕೆಯಾಗಿದ್ದು, ಇದರಿಂದ ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ. ಇದರಿಂದ ನಾನಾ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗಲಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ಕಾಲೇಜ ವಿಭಾಗದಲ್ಲಿ ವಿದ್ಯಾರ್ಥಿಗಳು ಇಲ್ಲಿ ಕಲಿಯಬಹುದು. ಆದಕಾರಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸೌಲಭ್ಯ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಾಗಲು ಎಲ್ಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಪಾಲಕರು ಸಹಕರಿಸಬೇಕು ಬರುವಂತ ದಿನಗಳಲ್ಲಿ ಶಾಲಾ ಕೊಠಡಿಗಳ ಹಾಗೂ ಶೌಚಾಲಯಗಳ ಕೊರತೆ ನೀಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಎಸ್.ಎಂ.ಕಪನಿಂಬರಗಿ, ಸಿ.ಆರ್.ಪಿ ಸೋಮೇಶ ಪಾಟೀಲ, ಬಿ.ಆರ್.ಪಿ.ಪಿ.ಆರ್.ಕಾಚೂರ, ಮುಖ್ಯ ಗುರುಗಳಾದ ಎಂ.ಎ.ಹೆಬ್ಬಾಳ, ಶಿಕ್ಷಕ ಪೀರ್ಜಾದೆ ಸೇರಿದಂತೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



