ಬಿಜೆಪಿ ಯೊಳಗಿನವರೇ ಡಿಸೆಂಬರ್ನಲ್ಲಿ ನರೇಂದ್ರ ಮೋದಿ ಪ್ರಧಾನಿ ಸ್ಥಾನದಿಂದ ಕೆಳಗಿಳಿದು, ನಿತಿನ್ ಗಡ್ಕರಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿದ್ದರೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಲ್ಲಿರುವವರು ಮೋದಿಯವರನ್ನು ಒತ್ತಾಯ ಪೂರ್ವಕವಾಗಿ ಒಪ್ಪಿಕೊಳ್ಳುತ್ತಿದ್ದಾರೆ, ಆದರೆ ಒಳಗೊಳಗೆ ತಿರಸ್ಕರಿಸುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಏನು ಬೇಕಾದರೂ ಮಾಡುತ್ತಾರೆ. ಬಿಹಾರ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ ಹೋಗಿ ಅಲ್ಲಿನ ಭಾಷೆ, ಸಮುದಾಯಗಳಿಗೆ ತಕ್ಕಂತೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.



