
ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಆಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಫೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿಯಾದ ಅಶೋಕ ದಳವಾಯಿ ಹೇಳಿದರು. ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ಬಸವಾದಿ ಶರಣರ ನುಡಿಯಂತೆ ನಾವು ನಿರ್ವಹಿಸುವ ಕಾರ್ಯವನ್ನು ಅತ್ಯಂತ ನೈತಿಕವಾಗಿ, ಶದ್ದೆಯಿಂದ ನಿರ್ವಹಿಸಬೇಕು. ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ, ಕೆಲಸಗಳ ಒತ್ತಡದ ಮಧ್ಯೆಯೂ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಆತ್ಮಸ್ಥೆರ್ಯ, ಮುಂದಾಳತ್ವ, ಪರಸ್ಪರ ಪರಿಚಯ ವೃದ್ಧಿಗೆ ಸಹಾಯಕವಾಗಿವೆ. ಹೊಂದಬೇಕು. ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಹಿರಿಮೆ-ಗರಿಮೆ ಹೆಚ್ಚಿಸುವಂತೆ ಅವರು ತಿಳಿಸಿದರು.




