ಭೀಮಾತೀರದಲ್ಲಿ ಗುಂಡಿನ ಮೊರೆತ ಆಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ. ದೇವರ ನಿಂಬರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ್ ಮೇಲೆ ಪೈರಿಂಗ್ ನಡೆದಿದೆ. ಮೂರು ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಲೆ ಹಾಗೂ ಎದೆಗೆ ಗುಂಡುಗಳು ತಗಲಿವೆ. ಇನ್ನು ಹಳೆ ವೈಷಮ್ಯ ಹಿನ್ನೆಲೆ ಈ ಕೃತ್ಯ ಆಗಿದೆ. ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಬಿರಾದಾರ ಆಗಿದ್ದರು.ಮೂರರಿಂದ ನಾಲ್ಕು ಜನ ಮುಸುಕುಧಾರಿಗಳಿಂದ ಕೃತ್ಯ ನಡೆದಿದ್ದು, ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಭೀಮನಗೌಡ ಬಿರಾದಾರ್ ಬಂದಿದ್ದರು.ಈ ವೇಳೆ ಕಟಿಂಗ್ ಮಾಡುವನ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಮಾಡಿದ್ದಾರೆ.ವಿಜಯಪುರದ ಖಾಸಗಿ ಆಸ್ಪತ್ರೆಗೆ ಬೀಮನಗೌಡ ದೇಹ ರವಾನೆ ಮಾಡಿದ್ದಾರೆ. ಈ ಕುರಿತು ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




