ರಾಜ್ಯದಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಲು ಲೈಸೆನ್ಸ್ ಕಡ್ಡಾಯಗೊಳಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವ ಸಾಧ್ಯತೆಯಿದೆ. ಸೋಮವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವುದಿಲ್ಲ ಎಂದರು. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಚಟುವಟಿಕೆಗಳಲ್ಲಿ ತೊಡಗಿರುವ ಯೂಟ್ಯೂಬ್ ಚಾನೆಲ್ ಗಳು ಸಮಾಜಕ್ಕೆ ಹಾನಿಕಾರಕವಾಗಿದ್ದು, ಅವುಗಳ ಹಾವಳಿ ತಡೆಯಲು ಲೈಸೆನ್ಸ್ ಕಡ್ಡಾಯಗೊಳಿಸಬೇಕೆಂದು ಸಂಘವೊಂದು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.




