ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಮಣಿಪುರದಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಪ್ರಧಾನಿ ಭೇಟಿನೀಡಿ, ಜನರ ಕಷ್ಟ ಆಲಿಸಬೇಕಿತ್ತು. ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ವಿರೋಧಪಕ್ಷದವರ ಒತ್ತಡದಿಂದ ಈಗ ಮಣಿಪುರಕ್ಕೆ ಹೋಗಿದ್ದಾರೆ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಪ್ರತಿಕ್ರಿಯಿಸಿ. ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ? ಸಮಾಜದ ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ. ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ಮಾಡುವುದು ಇಲ್ಲ. ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು.




