ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನ ಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ರಾತ್ರೋರಾತ್ರಿ ಆರು ಮಂದಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಪಿಣ್ಯ ಪೊಲೀಸರ ಇನ್ಫಾರ್ಮರ್ ಎಂದು ಹೇಳಿಕೊಂಡು ಮನೆಗೆ ನುಗ್ಗಿದ ಆರೋಪಿಗಳು, ಗಾಂಜಾ ಮಾರಾಟ ಮತ್ತು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಈ ವೇಳೆ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯನ್ನು ಪಕ್ಕದ ರೂಮ್ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಮಿಥುನ್ ಗಾಗಿ ಶೋಧ ಮುಂದುವರೆಸಿದ್ದಾರೆ.




