ಶಿವಮೊಗ್ಗದಲ್ಲಿ 38 ವರ್ಷದ ಮಹಿಳೆಯೊಬ್ಬಳು ತನ್ನ 12 ವರ್ಷದ ಮಗಳನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸರ್ಕಾರಿ ಆಸ್ಪತ್ರೆಯ ನರ್ಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ಶ್ರುತಿಯ ಪತಿ ರಾತ್ರಿ ಪಾಳಿ ಮುಗಿಸಿ ಮನೆಗೆ ಬಂದಾಗ ಬಾಗಿಲು ಲಾಕ್ ಆಗಿರುವುದನ್ನು ಕಂಡಾಗ ಶವಗಳು ಪತ್ತೆಯಾಗಿವೆ. ನಂತರ ಪತಿ ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ 6 ನೇ ತರಗತಿ ವಿದ್ಯಾರ್ಥಿನಿ ಪೂರ್ವಿಕಾ ತಲೆಗೆ ಗಾಯಗಳಾಡಾ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇನ್ನೂ ಶ್ರುತಿ ತನ್ನ ಮಗಳ ದೇಹದ ಮೇಲೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪ್ರಾಥಮಿಕ ವರದಿಗಳ ಪ್ರಕಾರ ಶ್ರುತಿ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಳು ಎನ್ನಲಾಗುತ್ತಿದೆ. ಪೊಲೀಸರು ಕೊಲೆ ಮತ್ತು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು,ಇತರ ಕೋನಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.




