ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ಧನಸಹಾಯವನ್ನು 2.13 ಲಕ್ಷ ಮಹಿಳೆಯರಿಗೆ ನಿಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ.ಈ ಕುರಿತಂತೆ ವಿಧಾನ ಪರಿಷತ್ನಲ್ಲಿಇತ್ತೀಚೆಗೆ ನಡೆದ ಚರ್ಚೆಯ ಸಂದರ್ಭದಲ್ಲಿ ಸಚಿವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.ಈ ಯೋಜನೆಯ ಉದ್ದೇಶ ಕುಟುಂಬದ ಗೃಹಿಣಿಯರಿಗೆ ಆರ್ಥಿಕ ನೆರವು ಒದಗಿಸುವುದಾಗಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯಿಂದ ಹೊರಗಿಡುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ.




