ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿಂದು ಮಾತನಾಡಿದ ಅವರು, ಪಾಕಿಸ್ತಾನ ನಿರಂತರವಾಗಿ ಭಾರತದ ಮೇಲೆ ದಾಳಿ ಮಾಡುತ್ತಿದ್ದರೂ, ಅದರೊಂದಿಗೆ ಕ್ರಿಕೆಟ್ ಆಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಹಲ್ಗಾಮ್ ದಾಳಿ ನಡೆದ ಆರು ತಿಂಗಳ ನಂತರವೂ ಎರಡೂ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇರುವಾಗ, ಈ ಪಂದ್ಯವು ಉತ್ತಮ ಬೆಳವಣಿಗೆಯಲ್ಲ. ಗುಂಡಿಗೆ ಗುಂಡು ಹಾರಿಸುವ ಕೆಲಸ ಮಾಡಬೇಕು, ಒತ್ತಡಕ್ಕೆ ಒಳಗಾಗಿ ಪಾಕಿಸ್ತಾನ ಜೊತೆ ಆಟ ಆಡಬಾರದು ಎಂದಿದ್ದಾರೆ.




